ದೇಹದ ತೂಕ ಕಡಿಮೆ ಮಾಡುವಲ್ಲಿ ಸಹಕಾರಿ ಟೊಮ್ಯಾಟೋ

 

ಸ್ಥೂಲಕಾಯದವರು ಮತ್ತು ದೇಹದ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಟೊಮ್ಯಾಟೋ ವರದಾನ. ದೇಹದಲ್ಲಿ ಸೇರಿಕೊಂಡಿರುವ ಕೊಬ್ಬಿನಂತಹ ಪದಾರ್ಥಗಳನ್ನು ದೇಹದಿಂದ ಹೊರಹಾಕಲು ಇದು ಸಹಕಾರಿಯಾಗಿದೆ.

ಟೊಮ್ಯಾಟೋ ಹಣ್ಣನ್ನು ಹಸಿಯಾಗಿ ಸ್ವಲ್ಪ ಉಪ್ಪು ಮತ್ತು ಸ್ವಲ್ಪ ಈರುಳ್ಳಿಯ ಜೊತೆಗೆ ದಿನವೂ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ದೇಹದ ತೂಕ ಗಣನೀಯವಾಗಿ ಕಡಿಮೆಯಾಗುತ್ತದೆ. ಟೊಮ್ಯಾಟೋ ಹಣ್ಣಿನ ರಸಕ್ಕೆ ಚಿಟಿಕೆ ಉಪ್ಪು ಮತ್ತು ಮೆಣಸಿನ ಕಾಳನ್ನು ಸೇರಿಸಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದಲ್ಲಿ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ.

ಟೊಮ್ಯಾಟೋ ಅರೆದು ಮುಖಕ್ಕೆ ಲೇಪನ ಮಾಡಿ ಮೃದುವಾಗಿ ಮಾಲಿಶ್ ಮಾಡಬೇಕು. ಸ್ವಲ್ಪ ಹೊತ್ತಿನ ನಂತರ ತೊಳೆಯಬೇಕು. ಇದರಿಂದ ಮುಖದ ಮೇಲಿರುವ ಕಲೆಗಳು ಮಾಯವಾಗಿ ಚರ್ಮ ನುಣುಪಾಗುತ್ತದೆ. ಮಾತ್ರವಲ್ಲ, ಕಾಂತಿಯುತವೂ ಆಗುತ್ತದೆ. ಮತ್ತೊಂದು ವಿಷಯವೇನೆಂದರೆ ಟೊಮ್ಯಾಟೋ ಹಣ್ಣುಗಳಿಗೆ ಸ್ವಲ್ಪ ಉಪ್ಪು, ಸ್ವಲ್ಪ ಕರಿಮೆಣಸಿನ ಪುಡಿ ಸೇರಿಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದಲ್ಲಿ ಹೊಟ್ಟೆಯಲ್ಲಿ ಹುಳುಗಳಿದ್ದರೆ ಹೊರಹೋಗುತ್ತವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read