HomeHealthಔಷಧೀಯ ಗುಣಗಳ ಆಗರ ಕೊತ್ತಂಬರಿ ಬೀಜ

ಔಷಧೀಯ ಗುಣಗಳ ಆಗರ ಕೊತ್ತಂಬರಿ ಬೀಜ

ಕೊತ್ತಂಬರಿ ಸೊಪ್ಪು ರುಚಿಕರ ಪರಿಮಳಯುಕ್ತವಾಗಿದ್ದು ಸಾರು, ಚಟ್ನಿ ಮುಂತಾದ ಅಡುಗೆಗಳಲ್ಲಿ ಬಳಸಲಾಗುತ್ತದೆ. ಕೊತ್ತಂಬರಿ ಬೀಜ ಕೂಡ ಸಾಕಷ್ಟು ಅನಾರೋಗ್ಯ ಸಮಸ್ಯೆಗಳಿಗೆ ಉಪಯುಕ್ತ. ಇದರಿಂದ ಸಿಗುವ ಆರೋಗ್ಯ ಉಪಯೋಗಗಳನ್ನು ತಿಳಿಯೋಣ.

* ಸ್ವಲ್ಪ ಕೊತ್ತಂಬರಿ ಬೀಜ, ಜೀರಿಗೆ, ಶುಂಠಿಯನ್ನು ಪುಡಿ ಮಾಡಿ ಹಾಲಿನಲ್ಲಿ ಬೆರೆಸಿ ಬಿಸಿ ಮಾಡಿ ಅದಕ್ಕೆ ಸ್ವಲ್ಪ ಸಕ್ಕರೆಯನ್ನು ಸೇರಿಸಿ ಸೇವಿಸಿದರೆ ಉತ್ತಮ ಆರೋಗ್ಯಕರ ಪಾನೀಯವಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

* ಕೊತ್ತಂಬರಿ ಬೀಜದ ಪುಡಿಯನ್ನು ನೆನೆಸಿ ಚೆನ್ನಾಗಿ ಕಿವುಚಿ ಶೋಧಿಸಿ ತೆಗೆದ ಕಷಾಯಕ್ಕೆ ಹಾಲು, ಸಕ್ಕರೆ ಬೆರೆಸಿ ಸೇವಿಸಿದಲ್ಲಿ ವಾಂತಿ ನಿಲ್ಲುತ್ತದೆ.

* ಕೊತ್ತಂಬರಿ ಬೀಜದ ಕಷಾಯಕ್ಕೆ ಸಕ್ಕರೆ ಬೆರೆಸಿ ಸೇವಿಸಿದಲ್ಲಿ ತಲೆಸುತ್ತು ಕಡಿಮೆಯಾಗುತ್ತದೆ. ಅಜೀರ್ಣವು ನಿವಾರಣೆಯಾಗುತ್ತದೆ.

 * ಕೊತ್ತಂಬರಿ ಬೀಜವನ್ನು ನೀರಲ್ಲಿ ನೆನೆಸಿಟ್ಟು ಮರುದಿನ ಬೆಳಗ್ಗೆ ಅದನ್ನು ಚೆನ್ನಾಗಿ ರುಬ್ಬಿ, ಸೋಸಿ, ಕಲ್ಲುಸಕ್ಕರೆ ಬೆರೆಸಿ ಸೇವಿಸಿದರೆ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.

* ಒಂದು ಲೋಟ ಎಳನೀರಿಗೆ ಅರ್ಧ ಚಮಚ ಕೊತ್ತಂಬರಿ ಬೀಜದ ಪುಡಿ, ಸ್ವಲ್ಪ ಬೆಲ್ಲ ಸೇರಿಸಿ ಪ್ರತಿದಿನ ಸೇವಿಸಿದರೆ ಉರಿಮೂತ್ರ ರೋಗ ನಿವಾರಣೆಯಾಗುತ್ತದೆ.

* ಕೊತ್ತಂಬರಿ ಬೀಜ ಹಾಗೂ ಒಣ ಶುಂಠಿಯನ್ನು ಜಜ್ಜಿ ತಯಾರಿಸಿದ ಕಷಾಯಕ್ಕೆ ಜೇನುತುಪ್ಪ ಬೆರೆಸಿ ಸೇವಿಸುವುದರಿಂದ ಹೊಟ್ಟೆನೋವು ಕಡಿಮೆಯಾಗುತ್ತದೆ.

* ಕೊತ್ತಂಬರಿ ಬೀಜದ ಪುಡಿಯನ್ನು ಜೇನುತುಪ್ಪದಲ್ಲಿ ಬೆರೆಸಿ ಬಾಯಲ್ಲಿಟ್ಟುಕೊಂಡು ಚಪ್ಪರಿಸುತ್ತಿದ್ದರೆ, ಬಾಯಿ ಹುಣ್ಣು ನಿವಾರಣೆಯಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular