ಮಧುಮೇಹ ನಿವಾರಕ ಪೋಷಕಾಂಶಗಳ ಆಗರ ʼನುಗ್ಗೆ ಸೊಪ್ಪುʼ

ನುಗ್ಗೆ ಸೊಪ್ಪಿನಲ್ಲಿ ವಿಟಮಿನ್‌ ಬಿ, ಸಿ, ಕೆ, ಬೀಟಾ-ಕ್ಯಾರೋಟೀನ್‌ ಹಾಗೂ ಪ್ರೋಟೀನ್‌ ಸೇರಿದಂತೆ ಇನ್ನಿತರ ಪೋಷಕಾಂಶಗಳಿವೆ. ನುಗ್ಗೆ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ ಎಂದು ಇತ್ತೀಚೆಗೆ ಸಂಶೋಧನೆಗಳಲ್ಲಿ ಖಚಿತಪಡಿಸಲಾಗಿದೆ. ಯಾಕೆಂದರೆ…..

* ನುಗ್ಗೆಸೊಪ್ಪು ದೇಹದಲ್ಲಿನ ಇನ್ಸುಲಿನ್‌ ಪ್ರಮಾಣವನ್ನು ಹೆಚ್ಚಿಸಲು ಪ್ರಚೋದನೆ ನೀಡುತ್ತದೆ. ಈ ಮೂಲಕ ನೈಸರ್ಗಿಕವಾಗಿ ರಕ್ತದಲ್ಲಿನ ಸಕ್ಕರೆಯ ಮಟ್ಟ ಕಡಿಮೆಯಾಗಲು ನೆರವಾಗುತ್ತದೆ.

 * ದೇಹದಲ್ಲಿ ಫ್ರೀ ರಾಡಿಕಲ್ ಗಳು ಹೆಚ್ಚುತ್ತಿದ್ದಂತೆಯೇ ಕೆಲವು ಅಂಗಗಳು ನಿಧಾನವಾಗಿ ತಮ್ಮ ಕ್ಷಮತೆಯನ್ನು ಕಳೆದುಕೊಳ್ಳುತ್ತಾ ಬರುತ್ತವೆ. ನುಗ್ಗೆ ಸೊಪ್ಪಿನಲ್ಲಿ ಜೈವಿಕ ಕ್ರಿಯೆ ಉತ್ತಮಗೊಳಿಸುವ ರಾಸಾಯನಿಕಗಳಿದ್ದು, ಹೆಚ್ಚಿನ ಆ್ಯಂಟಿ ಆಕ್ಸಿಡೆಂಟ್ ಗುಣವಿದೆ. ಇವು ಫ್ರೀ ರಾಡಿಕಲ್‌ ಕಣಗಳ ವಿರುದ್ಧ ಹೋರಾಡುವ ಮೂಲಕ ಘಾಸಿಯನ್ನು ತಡೆಯುತ್ತವೆ. ಮಧುಮೇಹದ ನಿಯಂತ್ರಣದಲ್ಲಿ ಈ ಗುಣ ಮಹತ್ತರದ್ದಾಗಿದೆ.

* ನುಗ್ಗೆ ಸೊಪ್ಪಿನಲ್ಲಿರುವ ಪೋಷಕಾಂಶಗಳು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುವ ಕಾರಣ ಆಯುರ್ವೇದದಲ್ಲಿ ಇದನ್ನು ಬಳಸಲಾಗುತ್ತದೆ.

* ಅಷ್ಟೇ ಅಲ್ಲದೇ ನುಗ್ಗೆ ಸೊಪ್ಪು ಹೆಚ್ಚಿನ ತೂಕವನ್ನು ಕಳೆದುಕೊಳ್ಳಲು ನೆರವಾಗುತ್ತದೆ.

* ರಕ್ತದೊತ್ತಡದ ಮೇಲೆ ನೇರ ಪರಿಣಾಮ ಬೀರುವುದಿಲ್ಲವಾದರೂ ರಕ್ತನಾಳಗಳ ಒಳಗೆ ಕೆಟ್ಟ ಕೊಲೆಸ್ಟ್ರಾಲ್‌ ಅಂಟಿಕೊಳ್ಳದಂತೆ ತಡೆಯುವ ಮೂಲಕ ಪರೋಕ್ಷವಾಗಿ ರಕ್ತದೊತ್ತಡ ಕಡಿಮೆಯಾಗಲು ನೆರವಾಗುತ್ತದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read