ಕಲಬುರಗಿ: ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಎದುರಲ್ಲೇ ಗರ್ಭಿಣಿಗೆ ಹೆರಿಗೆಯಾಗಿದೆ. ಜೇವರ್ಗಿ ತಾಲ್ಲೂಕಿನ ಚೆನ್ನಮ್ಮ ಎಂಬುವರು ಇಂದು ಬೆಳಗ್ಗೆ ಹೆರಿಗೆ ನೋವಿನಿಂದ ಆಸ್ಪತ್ರೆಗೆ ಆಗಮಿಸಿದ ವೇಳೆ ದಾಖಲಿಸಿಕೊಳ್ಳಲು ಸಿಬ್ಬಂದಿ ವಿಳಂಬ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾತಿ ಮಾಡಿಕೊಳ್ಳಲು ಸಿಬ್ಬಂದಿ ಹಿಂದೇಟು ಹಾಕಿದ್ದಾರೆ ಎನ್ನಲಾಗಿದ್ದು, ವಿಳಂಬವಾಗಿದ್ದರಿಂದ ಹೆರಿಗೆ ನೋವು ಕಾಣಿಸಿಕೊಂಡು ಆಸ್ಪತ್ರೆಯ ಎದುರಲ್ಲೇ ಚೆನ್ನಮ್ಮ ಮಗುವಿಗೆ ಜನ್ಮ ನೀಡಿದ್ದಾರೆ.
ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಬಳಿಕ ಅವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗಿದೆ.