ನವದೆಹಲಿ: ಶುಕ್ರವಾರ ರಾತ್ರಿಯಿಂದ ಲಾಕ್ಡೌನ್ ನಿಯಮವನ್ನು ಕೇಂದ್ರ ಸರ್ಕಾರ ಮತ್ತಷ್ಟು ಸಡಿಲಗೊಳಿಸಿದೆ. ಹಾಟ್ ಸ್ಪಾಟ್ ಹೊರತುಪಡಿಸಿ ಸೋಂಕು ರಹಿತ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.
ಶೇಕಡ 50 ರಷ್ಟು ನೌಕರರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡುವುದು ಸೇರಿದಂತೆ ಹಲವು ನಿಬಂಧನೆಗಳೊಂದಿಗೆ ವಾಣಿಜ್ಯ ಚಟುವಟಿಕೆ ಆರಂಭಕ್ಕೆ ಅನುಮತಿ ನೀಡಲಾಗಿದೆ. ಮಾಲ್ ಗಳಿಗೆ, ಶಾಪಿಂಗ್ ಕಾಂಪ್ಲೆಕ್ಸ್ ಗಳಿಗೆ ಅವಕಾಶವಿರುವುದಿಲ್ಲ. ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಅಂಗಡಿ ಓಪನ್ ಮಾಡುವಂತಿಲ್ಲ.
ಉಳಿದಂತೆ ಲಾಕ್ ಡೌನ್ ಸಡಿಲಿಸಿದ್ದು ಅವಶ್ಯಕವಲ್ಲದ ವಸ್ತುಗಳ ಮಾರಾಟ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ವಸತಿ ಸಂಕೀರ್ಣ ಮಾರುಕಟ್ಟೆ ಸಂಕೀರ್ಣಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲ ಅಂಗಡಿಗಳಿಗೂ ವಿನಾಯಿತಿ ನೀಡಲಾಗಿದೆ. ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ಗಳಿಗೆ ವಿನಾಯಿತಿ ನೀಡಿಲ್ಲ.