ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಲಾಕ್ ಡೌನ್ ಮೇ 3 ಕ್ಕೆ ಪೂರ್ಣಗೊಳ್ಳಲಿದ್ದು, ಆದರೆ ಇದನ್ನು ಮೇ 15 ರ ವರೆಗೆ ಮುಂದುವರೆಸುವುದು ನಿಶ್ಚಿತ ಎಂದು ಹೇಳಲಾಗಿದೆ.
ಹೊಸ ಮಾರ್ಗಸೂಚಿಗಳೊಂದಿಗೆ ಈ ಲಾಕ್ ಡೌನ್ ಅನುಷ್ಟಾನಗೊಳ್ಳಲಿದ್ದು, ಹಸಿರು ವಲಯದಲ್ಲಿ ಕೆಲ ನಿರ್ಬಂಧಗಳೊಂದಿಗೆ ಆರ್ಥಿಕ ಚಟುವಟಿಕೆಗೆ ಅನುವು ಮಾಡಿಕೊಡಲಾಗುತ್ತದೆ ಎನ್ನಲಾಗಿದೆ.
ಮೇ 4 ರಂದು ಹೊಸ ಮಾರ್ಗಸೂಚಿ ಘೋಷಣೆಯಾಗಲಿದೆ ಎನ್ನಲಾಗಿದ್ದು, ಈ ಲಾಕ್ ಡೌನ್ ಸಂದರ್ಭದಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ಸಿಗುವುದು ಅನುಮಾನವೆಂದು ಹೇಳಲಾಗಿದೆ.