ಶಿವಮೊಗ್ಗ: ಬುದ್ಧ ಜಯಂತಿ ಅಂಗವಾಗಿ ಇಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಒಂದು ದಿವಸದ ಮಟ್ಟಿಗೆ ಸ್ಥಗಿತಗೊಳಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಸೂಚಿಸಿದ್ದಾರೆ.
ಒಂದೊಮ್ಮೆ ಆದೇಶ ಉಲ್ಲಂಘಿಸಿದರೆ ಮಾಂಸ ಮಾರಾಟ ಮಾಡುವ ಅಂಗಡಿ ಮಾಲೀಕರುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.