ನವದೆಹಲಿ: ಬೀದಿಬದಿ ವ್ಯಾಪಾರಿಗಳ ಸಾಲ ಸೌಲಭ್ಯಕ್ಕಾಗಿ 5000 ಕೋಟಿ ರೂಪಾಯಿ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಆರಂಭಿಸಲು 10 ಸಾವಿರ ರೂಪಾಯಿ ಸಾಲ ನೀಡಲಾಗುವುದು.
ಸುಲಭ ವಿಧಾನದಲ್ಲಿ ಸಾಲ ಸೌಲಭ್ಯ ನೀಡಲಾಗುವುದು. ಬೀದಿ ವ್ಯಾಪಾರಿಗಳಿಗಾಗಿ ಸಾಲ ಯೋಜನೆಯನ್ನು ರೂಪಿಸಲಾಗಿದೆ. ಯೋಜನೆ ಮೂಲಕ 50 ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ವ್ಯಾಪಾರ ಆರಂಭಿಸಲು ತಲಾ 10 ಸಾವಿರ ರೂ. ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದು ಈ ಪ್ಯಾಕೇಜ್ ಮಾಹಿತಿಯನ್ನು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಅವರು, ಬೀದಿಬದಿ ವ್ಯಾಪಾರಿಗಳಿಗೆ ವಿಶೇಷ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.