ಬೆಂಗಳೂರು: ಜೂನ್ 30 ರವರೆಗೆ ಲಾಕ್ಡೌನ್ ಮುಂದುವರೆದಿದ್ದರೂ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಪ್ರಯಾಣಿಕರು, ಸಾರಿಗೆ ಸಿಬ್ಬಂದಿ ಮಾಸ್ಕ್ ಕಡ್ಡಾಯವಾಗಿ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಹಲವು ನಿಯಮಗಳನ್ನು ಪಾಲಿಸುವ ಮೂಲಕ ಬಸ್ ಸಂಚಾರ ಆರಂಭವಾಗಿದೆ.
ಎರಡು ತಿಂಗಳಿಗೂ ಅಧಿಕ ಕಾಲ ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಸಾರಿಗೆ ಇಲಾಖೆಗೆ ಭಾರೀ ನಷ್ಟವಾಗಿದೆ. ಈಗ ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಕರೆದುಕೊಂಡು ಹೋಗಬೇಕಿರುವುದರಿಂದ ಇಲಾಖೆಗೆ ಮತ್ತಷ್ಟು ನಷ್ಟ ಆಗುತ್ತಿದೆ.
ಹೀಗಿದ್ದರೂ ಕೂಡ ಬಸ್ ಟಿಕೆಟ್ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ. ಗುರುನ ಬಿಕ್ಕಟ್ಟಿನಿಂದ ಸಾರಿಗೆ ಇಲಾಖೆಗೆ ನಷ್ಟವಾಗಿದ್ದರೂ ಬಸ್ ಟಿಕೆಟ್ ದರವನ್ನು ಸದ್ಯಕ್ಕೆ ಹೆಚ್ಚಳ ಮಾಡುವುದಿಲ್ಲ. ಈ ಕುರಿತ ಪ್ರಸ್ತಾವನೆ ಕೂಡ ಸರ್ಕಾರದ ಮುಂದೆ ಇಲ್ಲ.
ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಈ ಕುರಿತು ಮಾಹಿತಿ ನೀಡಿದ್ದು, ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಾರಿಗೆ ಇಲಾಖೆ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆಗೆ ನಷ್ಟವಾಗಿದ್ದರೂ ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ.