ಬೆಂಗಳೂರು: ಈಗಾಗಲೇ ನಿಗದಿ ಮಾಡಿರುವಂತೆಯೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಪರೀಕ್ಷೆಗೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ವಿಧಾನಸೌಧದಲ್ಲಿ ಸಾರಿಗೆ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಉಚಿತವಾಗಿ ಬಸ್ ವ್ಯವಸ್ಥೆ ಕಲ್ಪಿಸುವ ಕುರಿತು ಚರ್ಚೆ ನಡೆದಿದ್ದು, ಸಾರಿಗೆ ಸಚಿವರು ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.