ಟೀಮ್ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ತಮಾಷೆ ಮಾಡಲು ಹೋಗಿ ಈಗ ಫಜೀತಿಗೆ ಸಿಲುಕಿದ್ದಾರೆ. ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕೇಸು ಎದುರಿಸುವಂತಾಗಿದೆ.
ಅಷ್ಟಕ್ಕೂ ನಡೆದದ್ದು ಏನೆಂದರೆ ಯುವರಾಜ್ ಸಿಂಗ್, ರೋಹಿತ್ ಶರ್ಮಾ ಜೊತೆ ಇನ್ಸ್ಟಾಗ್ರಾಮ್ ಲೈವ್ ನಲ್ಲಿ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಸ್ಪಿನ್ನರ್ ಯಜುವೇಂದ್ರ ಚಾಹಲ್ ಕಾಲೆಳೆಯುವ ಸಲುವಾಗಿ ‘ಭಂಗಿ’ ಎಂಬ ಪದ ಪ್ರಯೋಗಿಸಿದ್ದರು.
ಇದು ಹರ್ಯಾಣದ ಹಿಸಾರ್ ನಲ್ಲಿನ ವಕೀಲ ರಜತ್ ಕಲ್ಸನ್ ಅವರನ್ನು ಕೆರಳಿಸಿದೆ. ಹೀಗಾಗಿ ಅವರು ಯುವರಾಜ್ ಸಿಂಗ್ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಯುವರಾಜ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.