ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ದೇವೇಗೌಡರಿಗೆ ಬೆಂಬಲ ನೀಡಲು ಕಾಂಗ್ರೆಸ್ ತೀರ್ಮಾನ ಕೈಗೊಂಡಿದೆ. ಆದರೆ, ದೇವೇಗೌಡರು ಇನ್ನೂ ಸ್ಪರ್ಧೆಗೆ ಒಪ್ಪಿಕೊಂಡಿಲ್ಲ.
ಕಾಂಗ್ರೆಸ್ ಬೆಂಬಲದೊಂದಿಗೆ ರಾಜ್ಯಸಭೆಗೆ ಹೋಗುವ ಕುರಿತಾಗಿ ದೇವೇಗೌಡರು ಇನ್ನೂ ತೀರ್ಮಾನ ಕೈಗೊಂಡಿಲ್ಲ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಸಭೆ ನಡೆದಿದ್ದು ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಕಾಂಗ್ರೆಸ್ ಕೂಡ ದೇವೇಗೌಡರಿಗೆ ಬೆಂಬಲ ನೀಡಲು ಮುಂದಾಗಿದ್ದರು. ದೇವೇಗೌಡರು ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಲಾಗಿದೆ.