ಭಾನುವಾರದಂದು ಹೃದಯಾಘಾತಕ್ಕೊಳಗಾಗಿ ವಿಧಿವಶರಾಗಿದ್ದ ಖ್ಯಾತ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಸಹೋದರ ಧ್ರುವ ಸರ್ಜಾ ಅವರ ಫಾರಂ ಹೌಸ್ ನಲ್ಲಿ ಸಕಲ ವಿಧಿವಿಧಾನಗಳೊಂದಿಗೆ ನಡೆದಿದೆ.
ಈ ಸಂದರ್ಭದಲ್ಲಿ ಕುಟುಂಬಸ್ಥರು ಹಾಗೂ ಚಿತ್ರರಂಗದ ಗಣ್ಯರು ಉಪಸ್ಥಿತರಿದ್ದು, ಚಿರಂಜೀವಿ ಸರ್ಜಾ ಅವರಿಗೆ ಅಂತಿಮ ವಿದಾಯ ಹೇಳಿದ್ದಾರೆ. ಚಿರಂಜೀವಿ ಸರ್ಜಾ ಅವರ ತಂದೆ ವಿಜಯಕುಮಾರ್ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ.
ಈ ಸಂದರ್ಭದಲ್ಲಿ ಹಾಜರಿದ್ದವರೆಲ್ಲರ ಕಣ್ಣಾಲಿಗಳು ತುಂಬಿ ಬಂದಿದ್ದು, ಕೇವಲ 39ನೇ ವಯಸ್ಸಿನಲ್ಲಿ ಬಾಳ ಪಯಣಕೆ ವಿದಾಯ ಹೇಳಿದ ಚಿರಂಜೀವಿ ಸರ್ಜಾ ಅವರಿಗೆ ಕಂಬನಿ ಮಿಡಿದಿದ್ದಾರೆ.