ಅಗಸೆ ಬೀಜಗಳಲ್ಲಿ ನಾರಿನ ಅಂಶ ಹೆಚ್ಚಿದ್ದು, ಇದು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಸಂತಾನ ಶಕ್ತಿಯನ್ನು ಹೆಚ್ಚಿಸಲು ಮಾತ್ರವಲ್ಲ ಕೂದಲಿನ ಹಲವು ಸಮಸ್ಯೆಗಳಿಗೆ ಇದು ರಾಮಬಾಣ. ಇದರಲ್ಲಿ ವಿಟಮಿನ್ ಇ ಹೇರಳವಾಗಿದ್ದು, ಕೂದಲು ಉದುರುವ ಸಮಸ್ಯೆ, ಹೊಟ್ಟಿನ ಸಮಸ್ಯೆಗಳನ್ನು ನಿವಾರಿಸುತ್ತದೆ.
ಅಗಸೆ ಬೀಜಕ್ಕೆ ನೀರು ಹಾಕಿ ಚೆನ್ನಾಗಿ ಕುದಿಸಿ. ಅದು ಅರ್ಧ ಲೋಟ ಆಗಿ ಜೆಲ್ ರೂಪಕ್ಕೆ ಬರಲಿ. ತಣಿದ ಬಳಿಕ ಬಟ್ಟೆಯ ಸಹಾಯದಿಂದ ಸೋಸಿ. ನಂತರ ಕೊಬ್ಬರಿ ಎಣ್ಣೆ ಮಿಕ್ಸ್ ಮಾಡಿ ಕಾಟನ್ ಬಟ್ಟೆಯಿಂದ ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ.
ಇದರಿಂದ ಕೂದಲಿನ ಬುಡ ಗಟ್ಟಿಯಾಗಿ ಕೂದಲು ಉದುರುವ ಸಮಸ್ಯೆ ನಿವಾರಣೆ ಆಗುತ್ತದೆ. ಅಷ್ಟೇ ಅಲ್ಲದೆ ಕೂದಲು ಆರೋಗ್ಯಕರವಾಗಿ ದಪ್ಪ ಮತ್ತು ಉದ್ದವಾಗಿ ಬೆಳೆಯುತ್ತದೆ.
ವಾರದಲ್ಲಿ ಎರಡು ಬಾರಿ ಹೀಗೆ ಮಾಡಿ, ಜೆಲ್ ಅನ್ನು ಕೂದಲಿಗೆ ಹಚ್ಚಿ ಅರ್ಧ ಗಂಟೆ ಬಿಟ್ಟು ಉಗುರು ಬೆಚ್ಚಗಿನ ನೀರಿನಲ್ಲಿ ಕೆಮಿಕಲ್ ಕಡಿಮೆ ಇರುವ ಶಾಂಪೂ ಹಾಕಿ ತೊಳೆಯಿರಿ.