ಚಿಕ್ಕಬಳ್ಳಾಪುರ: ಜುಲೈನಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗಲಿದೆ ಎಂದು ಪರಿಣಿತರು ಮಾಹಿತಿ ನೀಡಿದ್ದಾರೆ. ಜುಲೈ ತಿಂಗಳಲ್ಲಿ ಕೊರೊನಾ ಸೋಂಕು ತೀವ್ರ ಏರಿಕೆ ಬಗ್ಗೆ ತಜ್ಞರು ಅಂದಾಜು ಮಾಡಿದ್ದಾರೆ. ಪರಿಸ್ಥಿತಿ ಎದುರಿಸಲು ಸರ್ಕಾರ ಸರ್ವ ಸಿದ್ಧತೆ ಕೈಗೊಂಡಿದೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಜುಲೈನಲ್ಲಿ ಕೊರೊನಾ ಸೋಂಕು ತೀವ್ರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಪರಿಣಿತರು ಮಾಹಿತಿ ನೀಡಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ರಾಜ್ಯದ ಜನ ಸಹಕಾರ ನೀಡಿದಂತೆ ಸಹಕಾರ ನೀಡಿದರೆ ಸೋಂಕು ಹರಡುವ ಸಾಧ್ಯತೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರದ ವತಿಯಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ವಿದೇಶಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಒಂದೆರಡು ತಿಂಗಳಲ್ಲೇ ಸೋಂಕಿತರ ಸಂಖ್ಯೆ ತೀವ್ರ ಏರಿಕೆ ಹಂತಕ್ಕೆ ತಲುಪಿತು. ರಾಜ್ಯದಲ್ಲಿ ಮಾರ್ಚ್ ನಲ್ಲಿ ಮೊದಲ ಪ್ರಕರಣ ದಾಖಲಾಗಿದ್ದು ಕೇರಳದಲ್ಲಿ ಜನವರಿ 9ರಂದು ಮೊದಲ ಪ್ರಕರಣ ಪತ್ತೆಯಾಗಿತ್ತು. ಅದಾಗಿ 4 ತಿಂಗಳು ಕಳೆದಿವೆ. ಸರ್ಕಾರ ಕೈಗೊಂಡ ಮುಂಜಾಗ್ರತೆ ಕ್ರಮಗಳಿಂದ ತೀವ್ರಗತಿ ಹಂತಕ್ಕೆ ತಲುಪಿಲ್ಲ ಎಂದು ತಿಳಿಸಿದ್ದಾರೆ.