ಪಡಿತರ ವಿತರಣೆ ಕುರಿತಂತೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಸರ್ಕಾರದ ಈ ನಿರ್ಧಾರದಿಂದ ಕೂಲಿ ಕಾರ್ಮಿಕರಿಗೆ ಅನುಕೂಲಕರವಾಗಲಿದೆ.
ಕೂಲಿ ಕೆಲಸ ಮಾಡುವವರು ತಮ್ಮ ಕೆಲಸಕ್ಕೆ ರಜೆ ಹಾಕದೆ ಪಡಿತರ ಸಾಮಗ್ರಿ ಪಡೆಯಲು ಅನುವಾಗುವಂತೆ ಇನ್ನು ಮುಂದೆ ರಾಜ್ಯದಾದ್ಯಂತ ನ್ಯಾಯಬೆಲೆ ಅಂಗಡಿಗಳು ರಾತ್ರಿ 8 ಗಂಟೆಯವರೆಗೆ ಪಡಿತರ ಸಾಮಗ್ರಿ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ. ಗೋಪಾಲಯ್ಯ ಬೀದರ್ ನಲ್ಲಿ ಈ ವಿಷಯ ತಿಳಿಸಿದ್ದು, ಬಡ ಕೂಲಿ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಬಂದ ಬಳಿಕವೂ ಪಡಿತರ ಪಡೆಯಲು ಇದರಿಂದ ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.