ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ತೀವ್ರ ಆರ್ಥಿಕ ಸಂಕಷ್ಟ ಎದುರಾಗಿದೆ. ಆದರೆ ಕೊರೊನಾ ವ್ಯಾಪಕವಾಗಿ ಹರಡದಂತೆ ತಡೆಯಲು ಲಾಕ್ ಡೌನ್ ಅನಿವಾರ್ಯವಾಗಿರುವುದರಿಂದ ಸಂಕಷ್ಟವನ್ನು ಸಹಿಸಿಕೊಳ್ಳಲೇಬೇಕಿದೆ.
ಸಾರ್ವಜನಿಕರು ಮಾತ್ರವಲ್ಲದೆ ಸರ್ಕಾರ ಸಹ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಹೀಗಾಗಿ ಕೆಲವೊಂದು ಪ್ರಕ್ರಿಯೆಗಳಿಗೆ ತಡೆ ನೀಡಿದೆ. ಇದರ ಬಿಸಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೂ ತಟ್ಟಿದ್ದು, ಹಲವು ವರ್ಷಗಳಿಂದ ಅನುದಾನದ ನಿರೀಕ್ಷೆಯಲ್ಲಿದ್ದ ಶಿಕ್ಷಣ ಸಂಸ್ಥೆಗಳಿಗೆ 2020-21 ಆರ್ಥಿಕ ವರ್ಷದಲ್ಲಿ ಅನುಮತಿ ನೀಡುವುದಿಲ್ಲ ಎಂದು ಸರ್ಕಾರ ತಿಳಿಸಿದೆ.
ಇದರ ಜೊತೆಗೆ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಹೊಸ ನೇಮಕ ಪ್ರಕ್ರಿಯೆಯನ್ನು ನಡೆಸದಿರಲು ತೀರ್ಮಾನಿಸಲಾಗಿದ್ದು, ಈ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಈ ನಿಯಮ ಈಗಾಗಲೇ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವ ನೇಮಕಗಳಿಗೂ ಅನ್ವಯವಾಗುತ್ತದೆ ಎಂದು ತಿಳಿಸಲಾಗಿದೆ.