ಬೆಂಗಳೂರು: ಕೊರೋನಾ ಸೋಂಕಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 28 ವರ್ಷದ ಯುವಕ ಸಾವನ್ನಪ್ಪಿದ್ದಾರೆ. ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲದ ಮೊದಲ ವ್ಯಕ್ತಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಯುವಕನಿಗೆ ಕೊರೋನಾ ಹೊರತಾಗಿ ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಸೋಂಕಿತ ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರಲ್ಲಿ ಕೊರೋನಾ ಜೊತೆಗೆ ಬೇರೆ ಆರೋಗ್ಯ ಸಮಸ್ಯೆಗಳಿದ್ದು, ಈ ಯುವಕನಿಗೆ ಯಾವುದೇ ಸಮಸ್ಯೆ ಇರಲಿಲ್ಲ ಎಂದು ಹೇಳಲಾಗಿದೆ.