ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಿಗಳ ಬಡ್ತಿ ಮೀಸಲಾತಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು ಆದೇಶದ ಬಗ್ಗೆ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
2019 ರ ಏಪ್ರಿಲ್ 15ರಂದು ಸುಪ್ರೀಂ ಕೋರ್ಟ್ ನೀಡಿದ ಆದೇಶದಿಂದಾಗಿ 1.3 ಲಕ್ಷ ಎಸ್ಸಿ/ಎಸ್ಟಿ ಉದ್ಯೋಗಿಗಳ ಬಡ್ತಿ ತಡೆ ಹಿಡಿಯಲಾಗಿದೆ.
ಇದರಿಂದಾಗಿ ನೌಕರರಿಗೆ ಆರ್ಥಿಕ ನಷ್ಟವಾಗಿದೆ. ಸುಪ್ರೀಂ ಕೋರ್ಟ್ ತೀರ್ಪಿಗೆ ಅನುಗುಣವಾಗಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ಅನುಮತಿ ನೀಡಬೇಕೆಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.