ಶಿವಮೊಗ್ಗ: ಜಿಲ್ಲೆಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ಆನ್ಲೈನ್ ಹಾಗೂ ಆಫ್ ಲೈನ್ಗಳೆರಡರಲ್ಲೂ ಋಣಭಾರ ಪ್ರಮಾಣ ಪತ್ರ ಹಾಗೂ ದೃಢೀಕೃತ ದಸ್ತಾವೇಜುಗಳ ಪ್ರತಿ (EC&CC) ಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಿ ಮಾಹಿತಿಯನ್ನು ಪಡೆಯುಬಹುದಾಗಿದೆ.
ಆನ್ಲೈನ್ನಲ್ಲಿ ಸಾರ್ವಜನಿಕರಿಗೆ ಕೆಲವು ಅನಾನೂಕೂಲವಾಗಿರುವುದನ್ನು ಅರಿತು ಈ ಅವಕಾಶ ಕಲ್ಪಿಸಿದ್ದು, ಸಾರ್ವಜನಿಕರು ಉಪನೋಂದಣಿ ಕಚೇರಿಗೆ ಖುದ್ದಾಗಿ ಹಾಜರಾಗಿ ಕಚೇರಿಯಲ್ಲಿ ಲಭ್ಯವಿರುವ ಅನುಬಂಧವನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ ಮಾಹಿತಿ ಪಡೆದುಕೊಳ್ಳುವಂತೆ ಜಿಲ್ಲಾ ನೋಂದಣಾಧಿಕಾರಿ ಎಂ.ಬಿ. ಹೇಮಗಿರೀಶ್ ತಿಳಿಸಿದ್ದಾರೆ.