alex Certify ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಕಂಬನಿ ಮಿಡಿದ ಬಾಲಿವುಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಕಂಬನಿ ಮಿಡಿದ ಬಾಲಿವುಡ್

Watch MS Dhoni: The Untold Story - Disney+ Hotstar

ಬಾಲಿವುಡ್ ಉದಯೋನ್ಮುಖ ಕಲಾವಿದ ಸುಶಾಂತ್ ಸಿಂಗ್ ರಜಪೂತ್ ಮುಂಬೈ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ನನಗೆ ಆಗಿರುವ ಆಘಾತವನ್ನು ವಿವರಿಸಲು ಪದಗಳೇ ಸಾಲುತ್ತಿಲ್ಲ ಎಂದು ನಟ ರಿತೇಶ್ ದೇಶ್ಮುಖ್ ಹೇಳಿದ್ದಾರೆ. ಸುಶಾಂತ್ ಸಿಂಗ್ ಇನ್ನಿಲ್ಲ ಎನ್ನುವುದೇ ತೀವ್ರ ದುಃಖ ತಂದಿರುವ ವಿಚಾರವಾಗಿದೆ ಎಂದು ಹೇಳಿದ್ದಾರೆ.

ಸುಶಾಂತ್ ಸಿಂಗ್ ಆತ್ಮಹತ್ಯೆ ನನಗೆ ಆಘಾತ ಮೂಡಿಸಿದೆ ಎಂದು ಕ್ರಿಕೆಟಿಗ ಇರ್ಫಾನ್ ಪಠಾಣ್ ಹೇಳಿದ್ದು ಅವರ ಕುಟುಂಬದವರಿಗೆ ಸಾಂತ್ವನ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ನಟ ಅಕ್ಷಯ್ ಕುಮಾರ್ ಟ್ವೀಟ್ ಮಾಡಿ, ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ನನಗೆ ಮಾತುಗಳೇ ಬರುತ್ತಿಲ್ಲ. ಅವರ ನಟನೆಯ ‘ಚಿಚ್ಚೋರೆ’ ಸಿನಿಮಾ ಇಷ್ಟಪಟ್ಟಿದ್ದೆ ಎಂದು ಹೇಳಿದ್ದಾರೆ.

ಸುಶಾಂತ್ ಸಿಂಗ್ ಅವರ ಸಾವಿನ ಸುದ್ದಿ ಒಂದು ದೊಡ್ಡ ದುರಂತ ಎಂದು ನಟಿ ಊರ್ಮಿಳಾ ಮಾತೋಂಡ್ಕರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...