ನವದೆಹಲಿ: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮತ್ತೆ ಕಠಿಣ ಲಾಕ್ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಲಾಕ್ಡೌನ್ ಕುರಿತಾದ ವದಂತಿಗೆ ನಾಳೆ ಪ್ರಧಾನಿ ಮೋದಿ ತೆರೆ ಎಳೆಯಲಿದ್ದಾರೆ. ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ನಾಳೆಯಿಂದ ಎರಡು ದಿನಗಳ ಕಾಲ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಸಂವಾದದಲ್ಲಿ ಲಾಕ್ಡೌನ್ ಮುಂದುವರಿಸುತ್ತಾರೆ ಇಲ್ಲವೇ ಎನ್ನುವುದನ್ನು ತಿಳಿದು ಬರಲಿದೆ.
ಕೊರೋನಾ ಸೋಂಕಿತರ ಸಂಖ್ಯೆ ತೀವ್ರ ಏರಿಕೆ, ಚಿಕಿತ್ಸಾ ಕ್ರಮಗಳು, ವೈದ್ಯಕೀಯ ಸೌಲಭ್ಯ, ಆರ್ಥಿಕ ವಿಚಾರ ಮೊದಲಾದವುಗಳ ಬಗ್ಗೆ ಮೋದಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿದ್ದು, ಇದೇ ವೇಳೆ ಕಠಿಣ ಲಾಕ್ ಡೌನ್ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.