ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಕಳೆದ ಹಲವು ವರ್ಷಗಳಿಂದ ಪ್ರಹಸನದಂತಾಗಿಬಿಟ್ಟಿತ್ತು. ಪ್ರತಿ ಬಾರಿಯೂ ವರ್ಗಾವಣೆ ಪ್ರಕ್ರಿಯೆಗೆ ಏನಾದರೊಂದು ವಿಘ್ನ ಬರುವ ಮೂಲಕ ಪದೇ ಪದೇ ಮುಂದೂಡಿಕೆಯಾಗುತ್ತಿತ್ತು.
ಇದೀಗ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ವರ್ಗಾವಣೆಗಾಗಿ ಹೊಸ ನಿಯಮ ಜಾರಿಗೆ ತಂದಿದ್ದು, ಆಕ್ಷೇಪಗಳನ್ನು ಅಹ್ವಾನಿಸಲಾಗಿದೆ.
ಎಲ್ಲವೂ ಅಂದುಕೊಂಡಂತೆ ನಡೆದರೆ ಇನ್ನೆರೆಡು ತಿಂಗಳೊಳಗಾಗಿ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎನ್ನಲಾಗಿದ್ದು, ಸ್ವತಃ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ವಿಷಯ ಖಚಿತಪಡಿಸಿದ್ದಾರೆ.