ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ಈಗಾಗಲೇ ಸಿದ್ಧತೆಗಳು ಪೂರ್ಣಗೊಂಡಿದ್ದು ಜೂನ್ 25 ರಿಂದ ಪರೀಕ್ಷೆಗಳು ಆರಂಭವಾಗಲಿದೆ.
ಪರೀಕ್ಷೆಗೆ ಗೈರುಹಾಜರಾಗುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲರಿಗೂ ಪೂರಕ ಪರೀಕ್ಷೆಯಲ್ಲಿ ಅವಕಾಶ ಕಲ್ಪಿಸಲಾಗುವುದು. ಇದನ್ನು ಮೊದಲ ಅವಕಾಶ ಎಂದೇ ಪರಿಗಣಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
ಪರೀಕ್ಷೆಗೆ ಗೈರುಹಾಜರಾದರು, ಪುನರಾವರ್ತಿತ ಅಭ್ಯರ್ಥಿಗಳು ಎಂದು ಪರಿಗಣಿಸುವ ಬದಲು ಖಾಸಗಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಪರೀಕ್ಷೆಗೆ ಗೈರು ಹಾಜರಾದವರಿಗೆ ನೇರವಾಗಿ ಮೊದಲ ಅವಕಾಶದ ಅಭ್ಯರ್ಥಿಗಳು ಎಂದು ಪರಿಗಣಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಮಕ್ಕಳನ್ನು ಕಳುಹಿಸಲು ಬಹುತೇಕ ಪೋಷಕರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಪರೀಕ್ಷೆ ಬರೆಯಲು ಸಾಧ್ಯವಾಗದವರಿಗೆ ಪೂರಕ ಪರೀಕ್ಷೆಯಲ್ಲಿ ಮೊದಲ ಅವಕಾಶವೆಂದೇ ಪರಿಗಣಿಸಿ ಅವಕಾಶ ನೀಡುವ ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ.