
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಬಿ.ಕೆ. ಹರಿಪ್ರಸಾದ್ ಮತ್ತು ನಾಸೀರ್ ಅಹಮದ್ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿದೆ.
ರಾಜ್ಯ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್ ಅವರು ಅಭ್ಯರ್ಥಿಗಳ ಆಯ್ಕೆ ಕುರಿತಾಗಿ ತೀರ್ಮಾನ ಕೈಗೊಂಡಿದ್ದಾರೆ.
ನಿವೇದಿತ್ ಆಳ್ವ ಸೇರಿದಂತೆ ಹಲವು ಹೆಸರುಗಳು ಕೇಳಿಬಂದಿದ್ದವು. ಅಂತಿಮವಾಗಿ ಪಕ್ಷದ ವರಿಷ್ಠರು ಬಿ.ಕೆ. ಹರಿಪ್ರಸಾದ್ ಮತ್ತು ನಾಸೀರ್ ಅಹಮದ್ ಅವರಿಗೆ ಟಿಕೆಟ್ ನೀಡಿದ್ದಾರೆ. ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.