ದಾವಣಗೆರೆ: ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಸೇರಿದಂತೆ ಯಾವ ಪರೀಕ್ಷೆಯನ್ನು ನಡೆಸಬಾರದು ಎಂದು ಒತ್ತಾಯಿಸಿ ಜೂನ್ 20ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಈ ಕುರಿತು ಮಾಹಿತಿ ನೀಡಿದ್ದಾರೆ. ದಾವಣಗೆರೆಯ ಜಯದೇವ ಸರ್ಕಲ್ ನಲ್ಲಿ ಎಸ್ಎಸ್ಎಲ್ಸಿ ಮತ್ತು ಪದವಿ ಪರೀಕ್ಷೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದ್ದಾರೆ.
ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಯಾವ ಪರೀಕ್ಷೆಗಳನ್ನು ನಡೆಸಬಾರದು. ಆನ್ಲೈನ್ ಪಾಠವನ್ನು ಕೂಡ ನಿಲ್ಲಿಸಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದು, ಜೂನ್ 20 ರಂದು ಬೆಂಗಳೂರಿನಲ್ಲಿ ಇದೇ ವಿಚಾರವಾಗಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಪೋಷಕರು ಮತ್ತು ವಿದ್ಯಾರ್ಥಿಗಳ ಆತಂಕವನ್ನು ಸರ್ಕಾರ ಅರಿಯಬೇಕು. ಕೊರೋನಾ ಕಾರಣದಿಂದ ಪರೀಕ್ಷೆ ನಡೆಸದೆ ಎಲ್ಲಾ ವಿದ್ಯಾರ್ಥಿಗಳನ್ನು ಪಾಸು ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.