ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳ ಪೈಕಿ ಎಂಟಿಬಿ ನಾಗರಾಜ್ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ.
ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಎಂಟಿಬಿ ನಾಗರಾಜ್ 1224 ಕೋಟಿ ರೂಪಾಯಿಗಿಂತಲೂ ಹೆಚ್ಚು ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಅವರ ಹೆಸರಲ್ಲಿ 884 ಕೋಟಿ ರೂಪಾಯಿಗಿಂತಲೂ ಹೆಚ್ಚು ಮೌಲ್ಯದ ಆಸ್ತಿ ಇದ್ದು ಪತ್ನಿ ಹೆಸರಲ್ಲಿ 331 ಕೋಟಿ ರೂಪಾಯಿಗಿಂತಲೂ ಹೆಚ್ಚು ಮೌಲ್ಯದ ಆಸ್ತಿಯಿದೆ.
ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್. ಶಂಕರ್ ಬಳಿ 301.38 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ. ಕಾಂಗ್ರೆಸ್ ಅಭ್ಯರ್ಥಿ ನಜೀರ್ ಅಹ್ಮದ್ ಮತ್ತು ಅವರ ಪತ್ನಿ ಹೆಸರಲ್ಲಿ ಸುಮಾರು 36 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ.
ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ. ಹರಿಪ್ರಸಾದ್ 14 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಮತ್ತು 60 ಲಕ್ಷ ರೂಪಾಯಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು 80 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದು, ಬಿಜೆಪಿ ಅಭ್ಯರ್ಥಿಯಾಗಿರುವ ಸುನಿಲ್ ವಲ್ಯಾಪುರೆ ಆಸ್ತಿ ಮೌಲ್ಯ 20 ಕೋಟಿ ರೂಪಾಯಿ ಆಗಿದೆ. ಪ್ರತಾಪ್ ಸಿಂಹ ನಾಯಕ್ 2.29 ಕೋಟಿ ರೂ.ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ಅಫಿಡವಿಟ್ ನಲ್ಲಿ ಹೇಳಲಾಗಿದೆ.