ಬೆಂಗಳೂರು: ಅಕ್ರಮ ಸಕ್ರಮಕ್ಕೆ ಒಂದು ತಿಂಗಳ ಗಡುವು ನೀಡಲಾಗಿದೆ. ರಾಜ್ಯದಲ್ಲಿ ಪೌರಾಡಳಿತ ಮತ್ತು ನಗರಾಭಿವೃದ್ಧಿ ಸಂಸ್ಥೆಗಳಿಗೆ ಸೇರಿದ ನಿವೇಶನದಲ್ಲಿ ನಿರ್ಮಿಸಲಾದ ಮನೆ, ಕಟ್ಟಡಗಳನ್ನು ಒಂದು ತಿಂಗಳೊಳಗೆ ಸಕ್ರಮಗೊಳಿಸುವಂತೆ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ನಿಯೋಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ. ಏಕ ನಿವೇಶನ ನೋಂದಣಿ, ಕಟ್ಟಡ ಪರವಾನಿಗೆ, ಕನ್ವರ್ಷನ್, ಖಾತೆ ಬದಲಾವಣೆ ಮೊದಲಾದ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಸಚಿವರಿಗೆ ಮನವಿ ಮಾಡಿದ್ದು ಇದಕ್ಕೆ ಸ್ಪಂದಿಸಿದ ಸಚಿವರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.
ಒಂದು ತಿಂಗಳ ಒಳಗೆ ನಗರಾಭಿವೃದ್ಧಿ ಸಂಸ್ಥೆ, ಪೌರಾಡಳಿತ ಸಂಸ್ಥೆಗೆ ಸೇರಿದ ನಿವೇಶನದಲ್ಲಿ ನಿರ್ಮಿಸಲಾದ ಕಟ್ಟಡಗಳ ಸಕ್ರಮಕ್ಕೆ ಸೂಚನೆ ನೀಡಿದ್ದಾರೆ.