ಕೊರೊನಾದಿಂದಾಗಿ ಮಕ್ಕಳಿಗೆ ಆನ್ ಲೈನ್ ತರಗತಿಗಳನ್ನು ಮಾಡಲಾಗುತ್ತಿದೆ. ಜೂಮ್ ಆಪ್ ಬಳಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ ಶಿಕ್ಷಕರು. ಆನ್ಲೈನ್ ಕ್ಲಾಸ್ ವೇಳೆ ಶಿಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಘಟನೆ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ನಡೆದಿದೆ.
ಆದರೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವುದು ಯಾವುದೇ ವಿದ್ಯಾರ್ಥಿಯಲ್ಲ. ಯಾರೋ ಅಪರಿಚಿತ ವ್ಯಕ್ತಿಯೊಬ್ಬ ಜೂಮ್ ಆಪ್ ನ ಹ್ಯಾಕ್ ಮಾಡಿ ಅವಾಚ್ಯ ಶಬ್ದಗಳಿಂದ ಶಿಕ್ಷಕರಿಗೆ ನಿಂದನೆ ಮಾಡಿದ್ದಾನೆ. ನಿಂದನೆ ಮಾಡಿದ ವ್ಯಕ್ತಿಯ ಬಗ್ಗೆ ವಿಚಾರಿಸಿದಾಗ ಆಪ್ ಹ್ಯಾಕ್ ಆಗಿರುವುದು ಕಂಡು ಬಂದಿದೆ.
ಇನ್ನು ಈ ಘಟನೆ ಸಂಬಂಧ ಶಾಲೆಯ ಪ್ರಿನ್ಸಿಪಾಲ್ ಸಿಐಡಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನನ್ವಯ ವ್ಯಕ್ತಿಯ ಹುಡುಕಾಟಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.