ಬೀದರ್ ಜಿಲ್ಲೆಯಲ್ಲಿ 73 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 484 ಕ್ಕೆ ಏರಿಕೆಯಾಗಿದೆ.
ಬೀದರ್ ಜಿಲ್ಲಾ ಆಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಆಗಮಿಸಿದ್ದ 73 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರು ಬೀದರ್ ಜಿಲ್ಲೆ ಬಸವಕಲ್ಯಾಣ, ಭಾಲ್ಕಿ, ಚಿಟಗುಪ್ಪ ಹಾಗೂ ಔರಾದ್ ತಾಲೂಕಿನವರಾಗಿದ್ದಾರೆ. ನಿನ್ನೆಯವರೆಗೆ 11 ಮಂದಿ ಕೊರೋನಾ ಸೋಂಕಿತರು ಮೃತಪಟ್ಟಿದ್ದಾರೆ.