ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಜೂನ್ 21 ರಿಂದ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿಗೆ ಒಂದು ರೂಪಾಯಿ ಕಡಿತ ಮಾಡಲಿದೆ.
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಹಾಲು ಶೇಖರಣೆ ಪ್ರಮಾಣ ಜಾಸ್ತಿಯಾಗಿದೆ. ದಿನಕ್ಕೆ 5 ಲಕ್ಷ ಕೆಜಿಗೂ ಅಧಿಕ ಸಂಗ್ರಹವಾಗುತ್ತಿದ್ದು, ಕೊರೋನಾ ಕಾರಣದಿಂದಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದ ಮೇಲೆ ಪರಿಣಾಮ ಉಂಟಾಗಿದೆ.
ಮಾರಾಟದಲ್ಲಿ ತೀವ್ರ ಕುಸಿತವಾದ ಕಾರಣದಿಂದ ಜೂನ್ 21 ರಿಂದ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿಗೆ 1 ರೂಪಾಯಿ ಕಡಿಮೆ ಮಾಡಲಾಗುವುದು ಎಂದು ಹೇಳಲಾಗಿದೆ.