ಸಾವು ಎಲ್ಲರಿಗೂ ಖಚಿತವಾಗಿದ್ದು, ಆದರೆ ಯಾರಿಗೆ ಯಾವ ರೂಪದಲ್ಲಿ ಬರುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಕೃಷಿ ಕಾರ್ಮಿಕನೊಬ್ಬ ‘ತೆಂಗಿನಕಾಯಿ’ ಕಾರಣಕ್ಕೆ ಮೃತಪಟ್ಟಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, 38 ವರ್ಷದ ರಮೇಶ್ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಈತ ಎಳನೀರಿನ ಗೊನೆ ಬಿಚ್ಚುವಾಗ ಕಾಯಿ ಬೆನ್ನಿನ ಮೇಲೆ ಬಿದ್ದ ಕಾರಣ ಗಂಭೀರವಾಗಿ ಗಾಯಗೊಂಡಿದ್ದ.
ಗಾಯಾಳು ರಮೇಶನನ್ನು ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.