ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಆರ್ಭಟ ಹೆಚ್ಚಿಸುತ್ತಿದ್ದು, ಸೋಂಕಿತರ ಸಂಖ್ಯೆ ಏರಿಕೆಯಾಗತೊಡಗಿದೆ. ಇದರ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.
ಈ ಪೈಕಿ ಕೊರೊನಾ ಸೋಂಕಿತರ ಸಂಪರ್ಕಕ್ಕೆ ಒಳಗಾದವರನ್ನು ಮನೆಯಲ್ಲೇ ಕ್ವಾರಂಟೈನ್ ಗೆ ಒಳಪಡಿಸಲಾಗಿದ್ದು, ಆದರೆ ಕೆಲವರು ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಹೊರಗಡೆ ಅಡ್ಡಾಡುತ್ತಿದ್ದರು.
ಇಂಥವರ ಮೇಲೆ ನಿಗಾ ಇರಿಸಲು ಮುಂದಾಗಿರುವ ಸರ್ಕಾರ, ಇದಕ್ಕಾಗಿ ಸರ್ಕಾರಿ ಮತ್ತು ಅನುದಾನಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರನ್ನು ನಿಯೋಜಿಸಲು ತೀರ್ಮಾನಿಸಿದ್ದು, ಈ ಕುರಿತ ಸುತ್ತೋಲೆ ಈಗಾಗಲೇ ಹೊರಬಿದ್ದಿದೆ.