ಬೆಂಗಳೂರು: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆ ಫಲಾನುಭವಿ ಬಿಪಿಎಲ್ ಕಾರ್ಡುದಾರರಿಗೆ ರಾಜ್ಯದ 518 ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಯುಷ್ಮಾನ್ ಯೋಜನೆಯನ್ನು ಕಾರ್ಡ್ ದಾರರು ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾನ ಚಿಕಿತ್ಸೆ ಪಡೆದುಕೊಳ್ಳಲು ಆರೋಗ್ಯ ಇಲಾಖೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ.
ಆರೋಗ್ಯ ಇಲಾಖೆ ಸುವರ್ಣ ಆರೋಗ್ಯ ಟ್ರಸ್ಟ್ ವೆಚ್ಚವನ್ನು ಭರಿಸಲಿದೆ. ಫಲಾನುಭವಿಗಳು ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಹೋಗದೆ ಸಂಬಂಧಿಸಿದ ಪಾಲಿಕೆ ಆಯುಕ್ತರು, ಆರೋಗ್ಯ ಅಧಿಕಾರಿ, ಹಿರಿಯ ಅಧಿಕಾರಿಗಳು ಶಿಫಾರಸು ಮಾಡಿದರೆ ಮಾತ್ರ ಹೋಗಬೇಕಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಸಹಾಯವಾಣಿ 1800 425 2646 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಲಾಗಿದೆ.