ರಾಮನಗರ ಜಿಲ್ಲೆಯ ಅವ್ವೇರಹಳ್ಳಿ ರೆಸಾರ್ಟ್ ನಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿ ರಾತ್ರಿ ಪಾರ್ಟಿ ಮಾಡುತ್ತಿದ್ದ 26 ಮಂದಿಯನ್ನು ಬಂಧಿಸಲಾಗಿದೆ.
ಬೆಂಗಳೂರು ಮೂಲದ 19 ಯುವಕರು, 6 ಮಂದಿ ಯುವತಿಯರು ಮದ್ಯ ಸೇವಿಸಿ ಮೋಜು-ಮಸ್ತಿ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು, ರೆಸಾರ್ಟ್ ಮಾಲೀಕ ಸೇರಿದಂತೆ ಯುವಕರು, ಯುವತಿಯರನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.
ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.