ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 453 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9150 ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 255 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 5618 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3391 ಸಕ್ರಿಯ ಪ್ರಕರಣಗಳು ಎಂದು 77 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವತ್ತು ಒಂದೇ ದಿನ 5 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದು ರಾಜ್ಯದಲ್ಲಿ ಇದುವರೆಗೆ 137 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು ಪತ್ತೆಯಾದ ಹೊಸ ಪ್ರಕರಣಗಳ ಪೈಕಿ 69 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು ಐವರು ಅಂತರರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.