
ನವದೆಹಲಿ: ತಂಟೆಗೆ ಬಂದ್ರೆ ಚೀನಾಗೆ ತಕ್ಕ ಶಾಸ್ತಿ ಮಾಡಲು ಸೇನೆಗೆ ಪರಮಾಧಿಕಾರ ನೀಡಲಾಗಿದೆ. ಸೇನಾಮುಖ್ಯಸ್ಥರೊಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆ ನಡೆಸಿದ್ದು ಗಡಿಯಲ್ಲಿ ಶಸ್ತ್ರಾಸ್ತ್ರ ಬಳಕೆಗೆ ಅನುಮತಿ ನೀಡಲಾಗಿದೆ.
ಚೀನಾ ಗಡಿಯಲ್ಲಿ ತಂಟೆ ತೆಗೆದರೆ ತಕ್ಕ ಉತ್ತರ ನೀಡಲು ಸೇನಾಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಕೆಲವು ಸಂದರ್ಭಗಳಲ್ಲಿ ಶಸ್ತ್ರಾಸ್ತ್ರ ಬಳಕೆಗೂ ಅನುಮತಿ ನೀಡಲಾಗಿದ್ದು ಈ ಮೂಲಕ ಶಸ್ತ್ರಾಸ್ತ್ರ ಬಳಕೆಯ ನಿರ್ಬಂಧ ಕೈಬಿಡಲಾಗಿದೆ.
ರಕ್ಷಣಾ ಪಡೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ರಾಜನಾಥ್ ಸಿಂಗ್ ಭೂಮಿ, ಆಕಾಶ, ಸಮುದ್ರದಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದ್ದಾರೆ. ಇನ್ನು ಎರಡನೇ ಮಹಾಯುದ್ಧದ 75ನೇ ವಿಜಯೋತ್ಸವದಲ್ಲಿ ಭಾಗಿಯಾಗಲು ರಾಜನಾಥ್ ಸಿಂಗ್ ರಷ್ಯಾ ಪ್ರವಾಸ ಕೈಗೊಳ್ಳಲಿದ್ದು ಚೀನಾ ಸಂಘರ್ಷದ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ.