ಬೆಂಗಳೂರು: ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೋಮವಾರದಿಂದ ದಕ್ಷಿಣ ಒಳನಾಡಿನ ಹಲವೆಡೆ ಉತ್ತಮ ಮಳೆಯಾಗಿದೆ. ಜೂನ್ 25 ರ ನಂತರ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು ಜೂನ್ 25 ರ ನಂತರ ಮಳೆ ಜೋರಾಗಲಿದೆ. ಅನುಕೂಲಕರ ವಾತಾವರಣ ಮುಂದುವರೆದರೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕರು ತಿಳಿಸಿದ್ದಾರೆ.
ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ಕರಾವಳಿಯಲ್ಲಿ ಮಳೆ ಚುರುಕಾಗಿದೆ. ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ. ಜೂನ್ 25ರ ನಂತರ ಉತ್ತಮ ಮಳೆಯಾಗಲಿದೆ ಎಂದು ಹೇಳಲಾಗಿದೆ.