ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದೆ. ಸೋಂಕಿತರ ಸಂಖ್ಯೆ 9,399 ಕ್ಕೆ ತಲುಪಿದ್ದು, ಈವರೆಗೆ 142 ಮಂದಿ ಮೃತಪಟ್ಟಿದ್ದಾರೆ.
ಕೊರೊನಾ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಪಿಗಳ ಖುದ್ದು ಹಾಜರಾತಿ ಕುರಿತಂತೆ ಹೈಕೋರ್ಟ್ ಮಹತ್ವದ ತೀರ್ಮಾನ ಕೈಗೊಂಡಿದ್ದು, ವಿಚಾರಣಾ ನ್ಯಾಯಾಲಯಗಳಲ್ಲಿ ಆರೋಪ ನಿಗದಿಪಡಿಸುವ ವೇಳೆ ಆರೋಪಿಗಳ ಖುದ್ದು ಹಾಜರಿಗೆ ವಿನಾಯಿತಿ ನೀಡಲಾಗಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಬಹುದು ಎಂದು ತಿಳಿಸಲಾಗಿದ್ದು, ಅಪರಾಧ ದಂಡ ಸಂಹಿತೆ ಸೆಕ್ಷನ್ 313 ಅಡಿ ಆರೋಪಿಗಳ ಹೇಳಿಕೆ ದಾಖಲಿಸುವ ನಿಯಮಗಳನ್ನು ತಾತ್ಕಾಲಿಕವಾಗಿ ಸಡಿಲಗೊಳಿಸಿ ಆದೇಶಿಸಲಾಗಿದೆ.