ವಾಷಿಂಗ್ಟನ್: ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆ ತಗ್ಗಿಸಲು ಮತ್ತು ವಲಸೆ ಕಾರ್ಮಿಕರ ತಡೆಯುವ ನಿಟ್ಟಿನಲ್ಲಿ ಹೆಚ್-1ಬಿ ವೀಸಾ ಗೆ ನಿರ್ಬಂಧ ಹೇರಲಾಗಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಬಂಧ ಆದೇಶಕ್ಕೆ ಸಹಿ ಹಾಕಿದ್ದಾರೆ. ಇದರಿಂದಾಗಿ ಭಾರತೀಯ ಮೂಲದ ಟೆಕ್ಕಿಗಳಿಗೆ ತೊಡಕಾಗಿದೆ. ವೀಸಾಗೆ ಭಾರತೀಯ ಐಟಿ ವೃತ್ತಿಪರರಲ್ಲಿ ಅತಿ ಹೆಚ್ಚಿನ ಬೇಡಿಕೆಯಿದ್ದು ಈ ನಿರ್ಧಾರದಿಂದ ಗೂಗಲ್, ಆಪಲ್, ಫೇಸ್ಬುಕ್, ಮೈಕ್ರೋಸಾಫ್ಟ್ ನಂತಹ ದೊಡ್ಡ ಕಂಪನಿಗಳಿಗೆ ಕೂಡ ತೊಡಕಾಗಿದೆ ಎಂದು ಹೇಳಲಾಗಿದೆ.
ಕೊರೋನಾ ಕಾರಣದಿಂದ ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಈ ವರ್ಷದ ಅಂತ್ಯದವರೆಗೆ ನಿರ್ಬಂಧ ಹೇರಲಾಗಿದೆ. ಹೆಚ್-1 ಬಿ ವೀಸಾಗೆ ಅಮೆರಿಕದಿಂದ ತಾತ್ಕಾಲಿಕ ನಿಷೇಧ ಹೇರಲಾಗಿದೆ.