alex Certify ಸಚಿವ ಸುಧಾಕರ್ ಗೆ ಬಿಗ್ ಶಾಕ್: ತಂದೆ ನಂತರ ಪತ್ನಿ, ಮಗಳಿಗೂ ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಸುಧಾಕರ್ ಗೆ ಬಿಗ್ ಶಾಕ್: ತಂದೆ ನಂತರ ಪತ್ನಿ, ಮಗಳಿಗೂ ಕೊರೋನಾ ಪಾಸಿಟಿವ್

ಬೆಂಗಳೂರು: ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಅವರ ಪತ್ನಿ, ಮಗಳಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ನಿನ್ನೆ ಅವರ ತಂದೆ ಮತ್ತು ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಕುಟುಂಬದ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ ಎಂದು ಸುಧಾಕರ್ ಹೇಳಿಕೊಂಡಿದ್ದರು.

ಇಂದು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಸುಧಾಕರ್, ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗೂ ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...