ಬೆಂಗಳೂರು: ಈ ಬಾರಿ ಕೊರೋನಾ ಕಾರಣದಿಂದಾಗಿ ಶಿಕ್ಷಕರ ವರ್ಗಾವಣೆ ಇರಲ್ಲ ಎಂದು ಹೇಳಲಾಗಿದೆ. ಶಿಕ್ಷಕರ ವರ್ಗಾವಣೆ ಹೊಸ ಕಾಯ್ದೆ ರಚನೆಯಾಗಿ ಕರಡು ನಿಯಮ ಸಿದ್ಧವಾಗಿದೆ.
ಹೀಗಿದ್ದರೂ ಈ ವರ್ಷ ವರ್ಗಾವಣೆ ಪ್ರಕ್ರಿಯೆ ನಡೆಯುವುದಿಲ್ಲ. ಇದರಿಂದಾಗಿ ಹಲವು ವರ್ಷಗಳಿಂದ ವರ್ಗಾವಣೆಗಾಗಿ ಕಾಯುತ್ತಿದ್ದ ಸರ್ಕಾರಿ ಶಾಲೆ ಶಿಕ್ಷಕರಿಗೆ ನಿರಾಸೆಯಾಗಿದೆ. ಕೊರೋನಾ ಕಾರಣದಿಂದಾಗಿ ಈ ವರ್ಷ ಸಾಮಾನ್ಯ ವರ್ಗಾವಣೆಯನ್ನು ಕೈಬಿಡಲಾಗಿದ್ದು, ವಿರಳ ಪ್ರಕರಣಗಳಲ್ಲಿ ಮುಖ್ಯಮಂತ್ರಿಯವರ ಅನುಮೋದನೆ ಪಡೆದು ವರ್ಗಾವಣೆ ಮಾಡಲು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶದ ಅನ್ವಯ ಶಿಕ್ಷಣ ಇಲಾಖೆ ಪ್ರಸಕ್ತ ಸಾಲಿನಲ್ಲಿ ವರ್ಗಾವಣೆಗೆ ಇರುವುದಿಲ್ಲ. ಸಿಎಂ ಒಪ್ಪಿಗೆ ಪಡೆದು ತುರ್ತು ಅಥವಾ ಅನಿವಾರ್ಯ ಸಂದರ್ಭದಲ್ಲಿ ವರ್ಗಾವಣೆ ಮಾಡಲಾಗುವುದು ಎಂದು ಹೇಳಲಾಗಿದೆ.