ಈ ಹಿಂದೆ ಬೆಂಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಐಎಎಸ್ ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜಯನಗರದ ತಮ್ಮ ನಿವಾಸದಲ್ಲೇ ವಿಜಯಶಂಕರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಐಎಂಎ ಪ್ರಕರಣದಲ್ಲಿ ವಿಜಯಶಂಕರ್ ಆರೋಪಿಯಾಗಿದ್ದು, ಜೈಲು ಪಾಲಾಗಿದ್ದರು.
ಜಾಮೀನಿನ ಮೇಲೆ ಹೊರ ಬಂದಿದ್ದ ಅವರು ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಐಎಎಸ್ ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ ಕುರಿತು ಹೆಚ್ಚಿನ ಮಾಹಿತಿ ಇನ್ನೂ ತಿಳಿದುಬರಬೇಕಿದೆ.