ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹೊತ್ತಲ್ಲೇ ನಾಳೆಯಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದೆ.
ಜುಲೈ 4 ರ ವರೆಗೆ ಪರೀಕ್ಷೆ ನಡೆಯಲಿದ್ದು ಶಿಕ್ಷಣ ಇಲಾಖೆಯಿಂದ ಮಕ್ಕಳ ಸುರಕ್ಷತೆಗಾಗಿ ಸಕಲ ಕ್ರಮಗಳನ್ನು ಕೈಗೊಳ್ಳಲಾಗಿದೆ. 8.48 ಪರೀಕ್ಷೆ ಬರೆಯಲಿದ್ದಾರೆ. 2879 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುವುದು. ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕೆಂದು ಸೂಚನೆ ನೀಡಲಾಗಿದ್ದು, ಸೋಂಕಿತರ ಮನೆಯ ಮಕ್ಕಳಿಗೆ ಪರೀಕ್ಷೆ ಇರುವುದಿಲ್ಲ. ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎನ್ನಲಾಗಿದೆ.