ಲಾಕ್ ಡೌನ್ ಸಡಿಲಿಕೆ ಮಾಡಿದ ಬಳಿಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಾ ಸಾಗಿದೆ. ಪ್ರತಿದಿನವೂ ಸೋಂಕಿತರ ಸಂಖ್ಯೆ ದ್ವಿಶತಕ ಸಾಮಾನ್ಯ ಎಂಬಂತಾಗಿದ್ದು, ಕೆಲವೊಂದು ದಿನ ಅದಕ್ಕೂ ಅಧಿಕವಾಗಿದೆ.
ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ತತ್ತರಿಸಿ ಹೋಗಿದ್ದು, ಹೀಗಾಗಿ ಸೋಂಕು ವ್ಯಾಪಕವಾಗಿರುವ ಕೆಲವೊಂದು ಪ್ರದೇಶಗಳಲ್ಲಿ ಮಂಗಳವಾರದಿಂದ ಸೀಲ್ ಡೌನ್ ಮಾಡುವ ಕಾರ್ಯ ಆರಂಭವಾಗಿದೆ.
ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡಲಾಗುತ್ತದಾ ಎಂಬ ಪ್ರಶ್ನೆ ಕೇಳಿ ಬರುತ್ತಿದೆಯಾದರೂ ಈ ವಿಚಾರದಲ್ಲಿ ಸರ್ಕಾರಕ್ಕೂ ಕೂಡ ಗೊಂದಲವಿದೆ ಎಂದು ಹೇಳಲಾಗುತ್ತಿದೆ.
ಒಂದೊಮ್ಮೆ ಲಾಕ್ ಡೌನ್ ಮಾಡಿದರೆ ಈಗಾಗಲೇ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿರುವ ಸರ್ಕಾರಕ್ಕೆ ಮುಂದೆ ನೌಕರರಿಗೆ ಸಂಬಳ ನೀಡಲೂ ಕಷ್ಟವಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಹೀಗಾಗಿಯೇ ಸಚಿವ ಆರ್. ಅಶೋಕ್ ಲಾಕ್ ಡೌನ್ ಲೋಡ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ಮಾತ್ರ ಕೊರೊನಾ ಸೋಂಕು ನಿಯಂತ್ರಣ ಮೀರಿದರೆ ಮತ್ತೊಮ್ಮೆ ಲಾಕ್ ಡೌನ್ ಮಾಡುವ ಕುರಿತು ಚಿಂತನೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಇದರ ಮಧ್ಯೆ ತಜ್ಞರು ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಕುರಿತು ವರದಿಯೊಂದನ್ನು ಸರಕಾರಕ್ಕೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದ್ದು, ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಲಾಕ್ ಡೌನ್ ಮಾಡುವುದು ಅನುಮಾನವಾಗಿದ್ದು, ಒಂದೊಮ್ಮೆ ಕೇಂದ್ರದಿಂದ ನಿರ್ದೇಶನ ಬಂದರೆ ಮಾತ್ರ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.