ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಒಂದು ರೀತಿ ಪ್ರಹಸನದಂತಾಗಿದ್ದು, ಒಂದಲ್ಲಾ ಒಂದು ಕಾರಣಕ್ಕೆ ಪದೇ ಪದೇ ಮುಂದೂಡಿಕೆಯಾಗುತ್ತಲೇ ಇರುತ್ತದೆ. ಈ ಬಾರಿಯಾದರೂ ವರ್ಗಾವಣೆ ಪ್ರಕ್ರಿಯೆ ಸುಗಮವಾಗಿ ನಡೆಯಲಿದೆ ಎಂಬ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಶಾಕ್ ಆಗಿದೆ.
ಕೊರೊನಾ ಕಾರಣಕ್ಕೆ ವರ್ಗಾವಣೆ ಪ್ರಕ್ರಿಯೆ ಈ ಬಾರಿ ನಡೆಯುವುದು ಅನುಮಾನ ಎಂದು ಹೇಳಲಾಗಿದ್ದು, ಹೀಗಾಗಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ರಾಜ್ಯ ಬಡ್ತಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕರ ಸಂಘ ವರ್ಗಾವಣೆ ನಡೆಸಲೇಬೇಕು ಎಂದು ಒತ್ತಾಯಿಸಿದೆ.
ಆದರೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈಗಾಗಲೇ ಆದೇಶವೊಂದನ್ನು ಹೊರಡಿಸಿದ್ದು, 2020 – 21 ನೇ ಸಾಲಿನ ಸಾಮಾನ್ಯ ವರ್ಗಾವಣೆ ಬಿಟ್ಟು ಅನಿವಾರ್ಯ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ವರ್ಗಾವಣೆ ಮಾಡಬಹುದೆಂದು ತಿಳಿಸಲಾಗಿದೆ. ಹೀಗಾಗಿ ಈ ಬಾರಿಯೂ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯುವುದು ಡೌಟ್.