alex Certify ಜುಲೈ 2 ರಂದು ಡಿಕೆಶಿ ಪದಗ್ರಹಣ ಸಮಾರಂಭಕ್ಕೆ 150 ಮಂದಿ ಭಾಗಿ, 7800 ಕಡೆ ನೇರ ಪ್ರಸಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜುಲೈ 2 ರಂದು ಡಿಕೆಶಿ ಪದಗ್ರಹಣ ಸಮಾರಂಭಕ್ಕೆ 150 ಮಂದಿ ಭಾಗಿ, 7800 ಕಡೆ ನೇರ ಪ್ರಸಾರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಜುಲೈ 2 ರಂದು ಅಧಿಕಾರ ವಹಿಸಿಕೊಳ್ಳಲಿದ್ದು ಪದಗ್ರಹಣ ಸಮಾರಂಭವನ್ನು 7800 ಕಡೆಗಳಲ್ಲಿ ನೇರಪ್ರಸಾರ ಮಾಡಲು ಸಿದ್ಧತೆ ಕೈಗೊಳ್ಳಲಾಗಿದೆ.

ಅಲ್ಲದೆ, ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 150 ಮಂದಿ ಮಾತ್ರ ಬಾಗಿಯಾಗಲಿದ್ದಾರೆ. ಪದಗ್ರಹಣ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಾದ್ಯಂತ 7800 ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಪದಗ್ರಹಣ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.

ಈ ವೇಳೆ ಸ್ಥಳೀಯ ಮುಖಂಡರು ಕಾರ್ಯಕರ್ತರು ಪ್ರತ್ಯೇಕ ಸ್ವೀಕರಿಸಲಿದ್ದು ಇದೊಂದು ವಿನೂತನ ಕಾರ್ಯಕ್ರಮವಾಗಿರುತ್ತದೆ. ತಂತ್ರಜ್ಞಾನ ಬಳಸಿಕೊಂಡು ಕಾರ್ಯಕ್ರಮ ಆಯೋಜಿಸಲಾಗುವುದು. ಪೂರ್ವ ಸಿದ್ಧತೆ ಪರಿಶೀಲನೆ ನಡೆಸಲಾಗಿದ್ದು ಪಕ್ಷದ ನಾಯಕರು ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...