ಲಾಕ್ ಡೌನ್ ಸಡಿಲಿಕೆ ಬಳಿಕ ವ್ಯಾಪಾರ ವಹಿವಾಟುಗಳು ಆರಂಭವಾಗಿದ್ದು, ಆದರೆ ಏರಿಕೆಯಾಗುತ್ತಿರುವ ಬೆಲೆ ಜನಸಾಮಾನ್ಯರನ್ನು ಕಂಗೆಡಿಸಿದೆ. ಕಳೆದ 19 ದಿನಗಳಿಂದ ಪೆಟ್ರೋಲ್ – ಡೀಸೆಲ್ ಬೆಲೆ ಪ್ರತಿನಿತ್ಯ ಏರಿಕೆಯಾಗುತ್ತಿದ್ದು, ಇದರ ಜೊತೆಗೆ ಚಿನ್ನದ ಬೆಲೆಯೂ ಮುಗಿಲುಮುಟ್ಟಿದೆ.
ಬುಧವಾರದಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ದರದಲ್ಲಿ 457 ರೂಪಾಯಿಗಳಷ್ಟು ಏರಿಕೆಯಾಗಿ 48,609 ರೂಪಾಯಿ ತಲುಪಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 423 ರೂಪಾಯಿ ಹೆಚ್ಚಳದೊಂದಿಗೆ 10 ಗ್ರಾಂ ಚಿನ್ನದ ದರ 49,352 ರೂಪಾಯಿ ತಲುಪಿದೆ.
ಲಾಕ್ಡೌನ್ ಸಡಿಲಿಕೆ ಬಳಿಕ ಚಿನ್ನದ ಪೂರೈಕೆ ಇಲ್ಲದಿರುವುದು, ಜಾಗತಿಕ ಮಾರುಕಟ್ಟೆಯಲ್ಲಿ ದರ ಏರಿಕೆಯಾಗುತ್ತಿರುವುದು ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಕೆ ಕಂಡಿರುವುದರಿಂದ ಚಿನ್ನದ ದರದಲ್ಲಿ ಏರಿಕೆಯಾಗಲು ಪ್ರಮುಖ ಕಾರಣವೆಂದು ಹೇಳಲಾಗಿದೆ.