ಕೊಲ್ಕತ್ತಾ: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಜುಲೈ 31 ರವರೆಗೆ ಲಾಕ್ ಡೌನ್ ಮುಂದುವರೆಸಲಾಗುವುದು.
ಜೂನ್ 30ಕ್ಕೆ ಲಾಕ್ಡೌನ್ ಅವಧಿ ಮುಕ್ತಾಯವಾದರೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜುಲೈ 31 ರವರೆಗೆ ಲಾಕ್ ಡೌನ್ ಮುಂದುವರಿಕೆ ಮಾಡಲಾಗುವುದು.
ಅಲ್ಲದೇ ಜುಲೈ ಅಂತ್ಯದವರೆಗೆ ಶಾಲಾ-ಕಾಲೇಜುಗಳು ಆರಂಭವಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಸುಮಾರು 3 ಗಂಟೆಗಳ ಕಾಲ ಸರ್ವಪಕ್ಷಗಳ ನಾಯಕರ ಸಭೆ ನಡೆಸಿದ ಅವರು ಜುಲೈ 31 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ.