ಮಹತ್ವದ ಬೆಳವಣಿಗೆಯಲ್ಲಿ ಸಿ.ಬಿ.ಎಸ್.ಇ., ಜುಲೈ 1 ರಿಂದ ಜುಲೈ 15 ರವರೆಗೆ ನಡೆಯಬೇಕಿದ್ದ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ.
ಕೊನೆಯ 3 ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಉತ್ತೀರ್ಣ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಪರೀಕ್ಷೆ ಕುರಿತಂತೆ ಸುಪ್ರೀಂ ಕೋರ್ಟ್ ಗೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ ಈ ಮಾಹಿತಿ ನೀಡಿದ್ದಾರೆ.